ಮಂಡ್ಯ: ಇಂದು ಪಟ್ಟಣದ ಪಾಂಡವ ಕ್ರೀಡಾಂಗಣದ ಎದುರು ಎಚ್ಡಿಕೆ ಬೃಹತ್ ಅಭಿನಂದನಾ ಸಮಾವೇಶ ಸಮಾರಂಭ ನಡೆಯಲಿದೆ. ಬೆಳಿಗ್ಗೆ 11:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಜೆಡಿಎಸ್ – ಬಿಜೆಪಿ ಎರಡು ಪಕ್ಷದ ಕಾರ್ಯಕರ್ತರನ್ನು ನಾಯಕರು ಸೇರಿಸಲಿದ್ದಾರೆ.
ಈಗಾಗಲೇ ಪಾಂಡವಪುರದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಸುಮಾರು 50 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ. ಇದೆಎಚ್ಡಿಕೆ ಕಾರ್ಯಕ್ರಮಕ್ಕೆ ಬರುವವರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದೆ. ಸಸ್ಯಹಾರಿ ಹಾಗೂ ಮಾಂಸಾಹಾರಿ ಊಟಕ್ಕೆ ಜೆಡಿಎಸ್ ನಾಯಕರು ವ್ಯವಸ್ಥೆ ಮಾಡಿದ್ದಾರೆ. ತಾಲೂಕುವಾರು ಕಾರ್ಯಕ್ರಮ ಆಯೋಜಿಸಿ ಎಚ್ಡಿಕೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಕಾಂಗ್ರೆಸ್ ವಿರುದ್ಧ ಎಚ್ಡಿಕೆ ಕಿಡಿ ಕಾರಲಿ ದ್ದಾರೆ.