ಗುಂಡ್ಲುಪೇಟೆ: ಪ್ರವಾಸಿಗರೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಈಚರ್ ಲಾರಿಯೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೇಲುಕಾಮಹಳ್ಳಿ ಗ್ರಾಮದ ಬಳಿ ನಡೆದಿದೆ.
ಆಂಧ್ರ ಪ್ರದೇಶ ಮೂಲದ ರಶೀಯ ಬೇಗಂ(52) ಮೃತ ಮಹಿಳೆ. ಮೇಲುಕಾಮನಹಳ್ಳಿ ಗ್ರಾಮದ ಬಳಿ ಟಿಟಿ ವಾಹನ ನಿಲ್ಲಿಸಿದ್ದ ವೇಳೆ ಮಹಿಳೆ ರಸ್ತೆ ದಾಟುತ್ತಿದ್ದಾಗ ತಮಿಳುನಾಡು ಮೂಲದ ಈಚರ್ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಘಟನೆಯಿಂದ ಮಹಿಳೆ ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನೂ ಮಾಹಿತಿ ಅರಿತ ಗುಂಡ್ಲುಪೇಟೆ ಪೆÇೀಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.