Friday, April 11, 2025
Google search engine

HomeUncategorizedಕಾಂಗ್ರೆಸ್ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ

ಕಾಂಗ್ರೆಸ್ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ

ಮೈಸೂರು: ಸುಭಿಕ್ಷಾ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಭಿಕ್ಷಾ ರಾಜ್ಯವನ್ನಾಗಿ ಮಾಡುತ್ತಿದೆ ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದರು.
ಕಾಂಗ್ರೆಸ್ ಸರ್ಕಾರಐದು ಗ್ಯಾರಂಟಿಗಳನ್ನು ಜಾರಿ ಮಾಡಿದ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದರು. ಚುನಾವಣೆಗೂ ಮೊದಲು ಹಳ್ಳಿ ಹಳ್ಳಿಗಳಲ್ಲಿ ಗ್ಯಾರಂಟಿಗಳ ಬಗ್ಗೆ ಡಂಗೂರ ಸಾರಿದ್ದರು. ಆದರೆ ಈಗ ಹಲವು ಷರತ್ತುಗಳನ್ನು ಹಾಕುತ್ತಿದ್ದಾರೆ. ೨೦೦ ಯುನಿಟ್ ವಿದ್ಯುತ್ ಉಚಿತ ಎಂದವರು ಈಗ ಸರಾಸರಿ ಲೆಕ್ಕಹಾಕಿ ನೀಡುತ್ತೇವೆ ಎನ್ನುತ್ತಿರುವುದು ಮೋಸ ಎಂದರು.
ಜನಧನ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಈಗಾಗಲೇ ಲಿಂಕ್ ಮಾಡಿದ್ದರೂ ಗೃಹಲಕ್ಷ್ಮಿ ಜಾರಿ ಮಾಡುತ್ತಿಲ್ಲ. ಯೋಜನೆ ಜಾರಿಯನ್ನು ಮುಂದೂಡಲು ನೆಪ ಹೇಳುತ್ತಿದ್ದಾರೆ. ಮನೆಯ ಯಜಮಾನಿ ಯಾರು ಎಂದು ಕುಟುಂಬದವರೇ ನಿರ್ಧಾರ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ, ಅತ್ತೆ, ಸೊಸೆ ಕೂತು ತೀರ್ಮಾನ ಮಾಡಲು ಸಾಧ್ಯವೇ? ಮುಸ್ಲಿಂ ಕುಟುಂಬದಲಿ ಇಬ್ಬರು ಪತ್ನಿಯರಿದ್ದರೆ ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆವರೆಗೆ ಜನರನ್ನು ಗ್ಯಾರಂಟಿ ಜಾರಿ ಹೆಸರಿನಲ್ಲಿ ಮಂಗ್ಯಾ ಮಾಡುತ್ತಾರೆ. ಕಾಂಗ್ರೆಸ್ ನೀತಿಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಆಸ್ತಿ ನೋಂದಣಿ, ಮದ್ಯದ ತೆರಿಗೆ ಸೇರಿ ಎಲ್ಲಾ ರೀತಿಯ ತೆರಿಗೆ ಹೆಚ್ಚಳ ಮಾಡುತ್ತಾರೆ. ಕರ್ನಾಟಕಕ್ಕೆ ಶ್ರೀಲಂಕಾ ಸ್ಥಿತಿ ಬರುವ ಕಾಲ ದೂರವಿಲ್ಲ. ಕೇಜ್ರಿವಾಲ್ ೨೦೧೩ರಲ್ಲಿ ಕಳಪೆ ಫ್ರೀಯೋಜನೆ ತಂದಿದ್ದರು. ಈಗ ಅದನ್ನೆ ಕಾಂಗ್ರೆಸ್ ಸರ್ಕಾರ ಮಾಡಿದೆ. ಇದು ಕರ್ನಾಟಕ ಮಾದರಿ ಇದನ್ನು ಹಲವು ಕ೩೪, ಪಕ್ಷಗಳು ಇದನ್ನು ಜಾರಿ ಮಾಡಿ ಜನರನ್ನು ಮಂಗ್ಯಾ ಮಾಡಿವೆ. ಕಾಂಗ್ರೆಸ್‌ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್ ಹಣ ತಂದರು ಆಗಲ್ಲ ಎಂದರು.

RELATED ARTICLES
- Advertisment -
Google search engine

Most Popular