ಮೈಸೂರು:2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನಕ್ಕಾಗಿ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ www.sw.kar.nic.in ವೆಬ್‌ಸೈಟ್‌ನಲ್ಲಿ ಜೂನ್ 15 ರಿಂದ ಜುಲೈ 15 ರವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ನೊಂದಾಯಿಸಲು ಅವಕಾಶವಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ನೊಂದಾಯಿಸಿದ ನಂತರ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳ ದೃಢೀಕರಣಗಳೊಂದಿಗೆ ಆಯಾಯ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಛೇರಿಗೆ ಜುಲೈ 15 ರೊಳಗೆ ಸಲ್ಲಿಸುವಂತೆ ಮೈಸೂರು ಜಿಲ್ಲೆ ಸಮಾಜ ಕಲ್ಯಾಣ ಇಲಾಖೆೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.