ಕೆ.ಆರ್.ಪೇಟೆ: ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಮಂಡಲಿಕನಹಳ್ಳಿ ಗ್ರಾಮದಲ್ಲಿ ಶ್ರೀಆಂಜನೇಯಸ್ವಾಮಿ ನೂತನ ದೇವಾಲಯದ ವಿಗ್ರಹ ಪ್ರತಿ?ನಾ ಮಹೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆಡೆಯಿತು.
ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ವಿಧಾನ ಪರಿ?ತ್ ಸದಸ್ಯ ಸೂರಜ್ ರೇವಣ್ಣ ಆಗಮಿಸಿ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷಪೂಜೆ ಸಲ್ಲಿಸಿ ಮಾತಾನಾಡಿ ನಮ್ಮ ಪೂರ್ವಜರ ಕಾಲದಿಂದಲೂ ಮಾಣವ ತನ್ನ ಮನಶಾಂತಿಗಾಗಿ ದೇವಾಲಯಗಳನ್ನು ನಿರ್ಮಿಸುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಯಿಂದ ಪೂಜೆಪುನಸ್ಕಾರಗಳನ್ನು ನೆರವೇರಿಸುವುದು ಸಾಮಾನ್ಯವಾಗಿದ್ದು ಮಾನವ ತನ್ನ ಕಷ್ಟಸುಖಗಳನ್ನು ಭಗವಂತನಲ್ಲಿ ನಿವೇದಿಸಿಕೊಂಡರೆ ಅವರ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ಬಾವನೆ ಬೆಳೆದು ಬಂದಿದೆ. ಆದ್ದರಿಂದಲೇ ಮಾನವ ನಮ್ಮ ಸಂಸ್ಕೃತಿಯ ಪ್ರತಿರೂಪದಂತಿರುವ ದೇವಾಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆಯುತ್ತಿದ್ದಾನೆ. ಇದು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು ಇದೇ ಆಚಾರ ವಿಚಾರ, ರೂಢಿ, ಸಂಪ್ರದಾಯಗಳನ್ನು ನಮ್ಮ ಮುಂದಿನ ಪೀಳಿಗೆಗೂ ಮುಂದುವರಿಸಿಕೊಂಡು ಹೋಗಬೇಕು ಎಂದರು.
ಗ್ರಾಮದಲ್ಲಿ ನೂತನ ದೇವಾಲಯದ ಪ್ರಾರಂಭೋತ್ಸವದ ಅಂಗವಾಗಿ ಗ್ರಾಮಕ್ಕೆ ತಳಿರುತೋರಣ ಕಟ್ಟಿ ಸಿಂಗರಿಸಲಾಗಿತ್ತು. ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜೆ ಹೋಮ ಹವನಗಳು ನಡೆದವು. ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ನೂತನ ದೇವಾಲಯದ ದೇವರ ದರ್ಶನ ಪಡೆದು ಪುಳಕಿತರಾದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮಂಜೇಗೌಡ, ನಾರಾಯಣ್, ನಿಂಗರಾಜು, ಗ್ರಾಮದ ಮುಖಂಡರು ಸೇರಿದಂತೆ ನೂರಾರು ಭಕ್ತಾಧಿಗಳು ಹಾಜರಿದ್ದರು.