ರಾಮನಗರ: ಚಿರತೆ ದಾಳಿಯಿಂದ ಹಸು ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವರಾಜು ಎಂಬುವವರಿಗೆ ಸೇರಿದ ೩ ವರ್ಷದ ಹಸು ನಿನ್ನೆ ರಾತ್ರಿ ಚಿರತೆ ದಾಳಿ ನಡೆಸಿದ್ದರಿಂದ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮೃತ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಲಾಯಿತು.