ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾದ ಪಿ.ಬಿ.ಯತೀಶ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇದ್ರ ನಾಯಕ್ ಅವರಿಗೆ ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಟಿ.ಆರ್. ಶರವಣಕುಮಾರ್, ಉಪಾಧ್ಯಕ್ಷರಾದ ಆನಂದ್ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು ೨೦೨೨-೨೦೨೩ನೇ ಸಾಲಿನ ಲಾಭಾಂಶದಿಂದ ತೆಗೆದ ಶೇಕಡಾ ೨ ರ? ಮೊತ್ತವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ನೀಡಬೇಕಾಗಿರುವುದರಿಂದ ಜಿಲ್ಲೆಯಲ್ಲೇ ಪ್ರಥಮವಾಗಿ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ಗೆ ನೀಡಿರುತ್ತಾರೆ.