ಮಂಡ್ಯ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ನೂತನವಾಗಿ ನವೀಕೃತಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಉದ್ಘಾಟನೆ ಮಾಡಿದರು.
ಉದ್ಘಾಟನಾ ನೇರವೇರಿಸಿ ಮಾತನಾಡಿದ ಅವರು ಇಂದಿನಿಂದ ಕಚೇರಿಯು ಸಾರ್ವಜನಿಕರ ಸೇವೆಗಾಗಿ ಸಿದ್ಧಗೊಂಡಿದೆ ಎಂದರು.
ಬೆಳಿಗ್ಗೆಯಿಂದ ಸಂಜೆವರೆಗೆ ಯಾರೇ ಬಂದರೂ ನಮ್ಮ ಆಪ್ತ ಸಹಾಯಕರು ಅವರ ಸಮಸ್ಯೆಗೆ ಸ್ಪಂದಿಸಲಿದ್ದಾರೆ. ನಾನು ಕೂಡ ಮಂಡ್ಯಕ್ಕೆ ಬಂದಾಗ ಕಚೇರಿಯಲ್ಲೆ ಲಭ್ಯವಿರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.