ಧಾರವಾಡ : ಧಾರವಾಡ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ 102 ಶಿಶುಪಾಲನಾ ಕೇಂದ್ರಗಳ ಪಾಲಕರ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 3 ರಂದು ಧಾರವಾಡ ಜಿಲ್ಲೆಯ ಸಾಮತ್ರ್ಯ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಕೆ ಅವರು ನಡೆಸಿದ ತರಬೇತಿಯನ್ನು ಉದ್ಘಾಟಿಸಿ, ಮಕ್ಕಳ ಪೋಷಣೆ ಕುರಿತು ಮಾಹಿತಿ ನೀಡಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಮುಖ್ಯ ಯೋಜನಾಧಿಕಾರಿಗಳು ಹಾಗೂ ಎಲ್ಲಾ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು ಸಂಪನ್ಮೂಲ ವ್ಯಕ್ತಿಗಳು, ಐಇಸಿ ಸಂಯೋಜಕರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.