ಬಳ್ಳಾರಿ: ಸೋಮವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ರಾಜ್ಯ ಶಾಖೆಯ ಉಪಾಧ್ಯಕ್ಷ ರಾಹುಲ್ ಶರಣಪ್ಪ ಸಂಕನೂರ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯಲ್ಲಿ ನೋಂದಾಯಿತ 156 ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮತ್ತು ನಮ್ಮ ಎಲ್ಲಾ ಸ್ವಯಂಸೇವಕರ ತಂಡವು ಪ್ರತಿ ಶಾಲೆಗೆ ತೆರಳಿ ಶಾಲಾ ಮುಖ್ಯೋಪಾಧ್ಯಾಯರಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಹಸ್ತಾಂತರಿಸಲಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಕಾರ್ಯದರ್ಶಿ ಎಂ.ಎ.ಶಾಕಿಬ್ ತಿಳಿಸಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಉಪಾಧ್ಯಕ್ಷ ಡಾ. ಎಸ್.ಜೆ.ವಿ.ಮಹಿಪಾಲ್, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ. ಸಿ ಸದಸ್ಯ ಕಪ್ಪಗಲ್ಲು ವೀರೇಶ್, ಪಿ.ವಾಸು, ಜೆಆರ್ ಸಿ ಸಂಯೋಜಕ ಮಹಾಂತೇಶ್, ಎಂ.ವಲಿ ಬಾಷಾ, ರಾಮಾಂಜಿನೇಯಲು ಇತರರು ಇದ್ದರು.