ಚಾಮರಾಜನಗರ: ವಿದ್ಯುತ್ ಸಂಬಂಧಿ ಕುಂದು ಕೊರತೆಗಳ ಆಲಿಕೆಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಚಾಮರಾಜನಗರ ಮತ್ತು ಕೊಡಗು ಅಧೀಕ್ಷಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಜೂನ್ ೧೩ರಂದು ಬೆಳಿಗ್ಗೆ ೧೧ ರಿಂದ ೧೨ ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ಉಪವಿಭಾಗದ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ ೧ ರಿಂದ ೨ ಗಂಟೆಯವರೆಗೆ ತಾಲೂಕಿನ ಹರದನಹಳ್ಳಿ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಸಭೆಗೆ ಹಾಜರಾಗಿ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳಿದ್ದಲ್ಲಿ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. ೧೩ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗ ವ್ಯಾಪ್ತಿಯಲ್ಲಿ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜೂನ್ ೧೩ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗುಂಡ್ಲುಪೇಟೆ, ಬರಗಿ, ಕೋಡಿಹಳ್ಳಿ, ಬೇರಂಬಾಡಿ, ನೇನೆಕಟ್ಟೆ, ವೀರನಪುರ, ಬೆಳವಾಡಿ, ಬಾಚಳ್ಳಿ, ಬೊಮ್ಮಲಾಪುರ, ದಾರಿಬೇಗೂರು, ಕೊಡಸೋಗೆ, ಹೆಗ್ಗವಾಡಿ ಮತ್ತು ಹಂಗಳ, ಶಿವಪುರ, ಕಲ್ಲಿಗೌಡನಹಳ್ಳಿ ಎನ್.ಜೆ.ವೈ, ಎಲಚಟ್ಟಿ, ಗೋಪಾಲ್‌ಪುರ ಎನ್.ಜೆ.ವೈ, ದೇವರಹಳ್ಳಿ, ಹೊನ್ನೇಗೌಡನಹಳ್ಳಿ, ಮಲ್ಲಯ್ಯನಪುರ ಹಾಗೂ ಹೊಂಗಹಳ್ಳಿ ಐಪಿ, ಮುಂಟಿಪುರ ಐಪಿ, ಹೆಚ್.ಎಸ್.ಹುಂಡಿ ಎನ್.ಜೆ.ವೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ ೧೯೧೨ ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. ೧೩ರಂದು ಚಾಮರಾಜನಗರ, ಹರದನಹಳ್ಳಿಯಲ್ಲಿ ವಿದ್ಯುತ್ ಜನಸಂಪರ್ಕ ಸಭೆ
RELATED ARTICLES