Thursday, April 17, 2025
Google search engine

Homeರಾಜ್ಯದೃಢಸಂಕಲ್ಪವಿದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ

ದೃಢಸಂಕಲ್ಪವಿದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ

ಧಾರವಾಡ : ವಿದ್ಯಾರ್ಥಿಗಳು ಗುರಿ ಮುಟ್ಟುವ ಸಂಕಲ್ಪ ತೊಟ್ಟಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಧಾರವಾಡ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು. ಸ್ಥಳೀಯ ಸರಕಾರಿ ಮಾದರಿ ಶಾಲೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದರು.

ಅಭ್ಯಾಸದ ಸಮಯದಲ್ಲಿ ನೀವು ನಿಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಇದರಿಂದ ನಿಮ್ಮ ಮನಸ್ಸು ಬೇರೆಡೆ ನೋಡುವುದಿಲ್ಲ. ಅದಕ್ಕಾಗಿಯೇ ನೀವು ಬೆಳಿಗ್ಗೆ ಎದ್ದೇಳುವ ದಿನಚರಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಯೋಗದಂತಹ ಅಭ್ಯಾಸಗಳನ್ನು ಮಾಡುವುದರಿಂದ ನಿಮ್ಮ ಮನಸ್ಸನ್ನು ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ನೀವು ಓದುವ ವೇಳಾಪಟ್ಟಿಯೊಂದಿಗೆ ಮತ್ತು ಕ್ರಮಬದ್ಧವಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಷ್ಟಗಳಿರುತ್ತವೆ, ಅವುಗಳನ್ನು ಎದುರಿಸಿದರೆ ಯಶಸ್ಸು ಸಿಗುತ್ತದೆ. ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ನಂತರ ಶಾಲೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿ, ಮುಖ್ಯೋಪಾಧ್ಯಾಯರಿಂದ ಸಮಗ್ರ ಮಾಹಿತಿ ಪಡೆದು ಶಾಲೆಯ ಮೂಲಸೌಕರ್ಯಗಳ ಬಗ್ಗೆ ಕಾಳಜಿ ವಹಿಸಿ, ಕೊರತೆಗಳಿದ್ದಲ್ಲಿ ಮತ್ತು ಅಗತ್ಯವಿದ್ದಲ್ಲಿ ಸಂಬಂಧಿಸಿದ ಇಲಾಖೆಗೆ ತರಲು ಹೇಳಿದರು. ಶಾಲೆಯಲ್ಲಿ ಉತ್ತಮ ವಾತಾವರಣವಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಸುರೇಶ ಸನದಿ, ಎಸ್‌ಡಿಎಂಸಿ ಅಧ್ಯಕ್ಷ ರಾಚಯ್ಯ ಹಿರೇಮಠ, ಉಪಾಧ್ಯಕ್ಷೆ ಲಲಿತಾ ಜಾಧವ ಸೇರಿದಂತೆ ಶಿಕ್ಷಕರು ಎಸ್‌ಡಿಎಂಸಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular