ಗುಂಡ್ಲುಪೇಟೆ: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಕೋರ್ಸ್‌ಗಳು ಪೂರಕವಾಗಿವೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ೨೦೨೩- ೨೪ನೇ ಸಾಲಿನ ಪ್ರಥಮ ವರ್ಷದ ಡಿಟಿಡಿಎಂ ಕೋರ್ಸ್ ನ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳು ರಾಜ್ಯದ ಆಯ್ದ ಭಾಗಗಳಲ್ಲಿ ಮಾತ್ರ ಇವೆ. ತಾಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದ್ದ ಹಿನ್ನೆಲೆಯಲ್ಲಿ ನನ್ನ ತಂದೆ ಎಚ್.ಎಸ್.ಮಹದೇವಪ್ರಸಾದ್ ಅವರು ವಿಶೇಷ ಆಸಕ್ತಿ ವಹಿತಿ ಕೇಂದ್ರವನ್ನು ತಾಲೂಕಿಗೆ ತಂದರು. ಇಲ್ಲಿ ಕಲಿತ ಸಾಕಷ್ಟು ವಿದ್ಯಾರ್ಥಿಗಳು ಈಗ ಪ್ರತಿಷ್ಟಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ಉದ್ಯೋಗದಾತರಾಗಿದ್ದಾರೆ. ಆದ್ದರಿಂದ ತಾಲೂಕಿನ ಯುವ ಸಮುದಾಯ ತರಬೇತಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಅನಿಲ್‌ಕುಮಾರ್ ಮತ್ತು ಉಪನ್ಯಾಸಕರು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮೇಲ್ವಿಚಾರಕರು, ತರಬೇತಿ ಕೇಂದ್ರದ ಪ್ರಥಮ ವರ್ಷದ ವಿದ್ಯಾರ್ಥಿಗಳ ಜೊತೆಗೆ ಪೊ?ಷಕರು ಭಾಗವಹಿಸಿದ್ದರು.