ಮೈಸೂರು: ಜೂ.೧೬ ಮತ್ತು ೧೭ ರಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧೀನ ಕಾರ್ಯದರ್ಶಿಗಳಾದ ದಿಲೀಪ್ ಕುಮಾರ್ ಗುಪ್ತ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜೂನ್ ೧೬ ರಂದು ಮಧ್ಯಾಹ್ನ ೨ ಗಂಟೆಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ಪರಿಶಿಷ್ಟ ಜಾತಿ ನೌಕರರ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ ೧೨ ಗಂಟೆಗೆ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಮತ್ತು ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಸಂಸ್ಥೆಯ ಎಸ್‌ಸಿ ನೌಕರರ ಸಮಸ್ಯೆ, ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀತಿ ಮತ್ತು ಸೇವಾ ಸುರಕ್ಷತೆ, ಕೇಂದ್ರ ಹಾಗೂ ರಾಜ್ಯ ಅನುದಾನಿತ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಹಾಗೂ ಎಸ್ಸಿ ಜನರ ಯೋಗಕ್ಷೇಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳ ಕುರಿತು ಚರ್ಚಿಸುವರು.
ಜೂ.೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲೆಯ ಎಸ್‌ಸಿ ನೌಕರರ ಸಮಸ್ಯೆಗಳ ಕುರಿತು, ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀತಿ ಮತ್ತು ಸೇವಾ ಸುರಕ್ಷತೆ, ಕೇಂದ್ರ ಹಾಗೂ ರಾಜ್ಯ ಅನುದಾನಿತ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಹಾಗೂ ಎಸ್ಸಿ ಜನರ ಯೋಗಕ್ಷೇಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಇತರ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.