ಪಿರಿಯಾಪಟ್ಟಣ:ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಇತರರಿಗೂ ಪರಿಸರ ಹಾಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ತಿಳಿಸಿದರು.
ಪಟ್ಟಣದಲ್ಲಿ ಗುರು ಗ್ರೂಪ್ ಆಫ್ ಮೆಡಿಕಲ್ಸ್ ಹಾಗೂ ಶ್ರೀ ಕ್ಲಿನಿಕ್ ಸಂಸ್ಥೆ ವತಿಯಿಂದ ಮಂಗಳವಾರ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಹಣ್ಣಿನಗಿಡ ಮತ್ತು ಪರಿಸರ ಸ್ನೇಹಿ ಹೂವಿನ ಗಿಡಗಳನ್ನು ವಿತರಿಸಿ ಮಾತನಾಡಿದರು.
ಮನುಷ್ಯ ಒತ್ತಡದಲ್ಲೇ ಜೀವನ ಸಾಗಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಸುತ್ತಮುತ್ತಲಿನ ಪರಿಸರವೂ ಶುದ್ಧವಾಗಿರಬೇಕು. ವಿದ್ಯಾವಂತ ಯುವಕರು ಹಾಗೂ ಪ್ರಜ್ಞಾವಂತ ನಾಗರಿಕರು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಇತರರಿಗೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಪರಿಸರದಿಂದ ಉತ್ತಮ ಆರೋಗ್ಯ, ಪರಿಸರ ಹಾಳಾದಷ್ಟು ನಮ್ಮ ಆರೋಗ್ಯವೂ ಹಾಳಾಗುತ್ತದೆ ನಾವು ಪರಿಸರವನ್ನು ನಾಶ ಮಾಡುತ್ತಿದ್ದೇವೆ, ಉತ್ತಮ ಆರೋಗ್ಯವನ್ನು ಪಡೆಯಲು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕಿದೆ. ಹಾಗಾಗಿ ಮರಗಿಡಗಳು ಜೀವನದ ಒಂದು ಭಾಗವಾಗಿರಬೇಕು, ಸ್ವಚ್ಚತೆಯ ನೆಪದಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಮರಗಿಡಗಳನ್ನು ಕಡಿದು ಮೈದಾನವಾಗಿಸುವುದು ಬೇಡಾ ಮನೆಯ ಅಂಗಳದಲ್ಲಿ ಉತ್ತಮ ಗಿಡ ಮರಗಳನ್ನು ಬೆಳೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ವೈದ್ಯಾಧಿಕಾರಿ ವೈ.ವಿ.ಪ್ರಕಾಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಕಳವಳ ವ್ಯಕ್ತ ಪಡೆಸಿದ ಅವರು, ಪರಿಸರ ಉಳಿದರೆ ಮಾತ್ರ ನಾವು ಎಂಬ ಸಂದೇಶ ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಆಗಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್ ಉಪ ನಿರೀಕ್ಷಕ ಕೆ.ವಿ.ಶ್ರೀಧರ್, ಗುರು ಗ್ರೂಪ್ಸ್ ಆಫ್ ಮೆಡಿಕಲ್ಸ್ ಸಂಸ್ಥಾಪಕ ರಘುಪತಿ, ಗ್ರಾಮ ಪಂಚಾಯತಿ ಸದಸ್ಯರಾದ ಚಂದ್ರು, ಶ್ರೀಪತಿ , ಡಾ.ರಂಜಿತಾ, ಮುಖಂಡರಾದ ಮೋಹನ್ ಮಾಸ್ಟರ್, ಕ್ಷೀರ ಸಾಗರ, ದೊಡ್ಡ ಬ್ಯಾಲಾಳು ಅಭಿ, ಸುನಿಲ್, ಪ್ರದೀಪ್, ವಿ.ಸ್.ರಾಮಚಂದ್ರ, ಮಹೇಶ್, ಅರುಣ್ ಕುಮಾರ್, ರಮೇಶ್ ಹಬಟೂರು, ನಿಶಾಂತ್, ಎಚ್ಡಿಎಫ್ಸಿ ವ್ಯವಸ್ಥಾಪಕ ಸಿದ್ದೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
06ಪಿವೈಪಿ01: ಪಟ್ಟಣದ ಗುರು ಗ್ರೂಪ್ ಆಫ್ ಮೆಡಿಕಲ್ಸ್ ಹಾಗೂ ಶ್ರೀ ಕ್ಲಿನಿಕ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಹಣ್ಣಿನಗಿಡ ಮತ್ತು ಪರಿಸರ ಸ್ನೇಹಿ ಹೂವಿನ ಗಿಡಗಳನ್ನು ವಿತರಿಸಿದರು.
ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿ: ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್
RELATED ARTICLES