ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್ ಕೃಷ್ಣರಾಜನಗರ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೦೨೩ನೇ ಸಾಲಿನ ಪತ್ರಿಕಾ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯ ೨೦೨೩ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ ೯೫ಕ್ಕಿಂತ ಹೆಚ್ಚಿನ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಕೃಷ್ಣರಾಜನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಅರ್ಹತೆಯುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ ೨೧. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪ್ರೆಸ್ ಕ್ಲಬ್ ನ ತಾಲೂಕು ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮೊ: ೯೯೦೧೫೩೫೨೩೪ ನ್ನು ಸಂಪರ್ಕಿಸಬಹುದಾಗಿದೆ.