ಚಾಮರಾಜನಗರ: ಸರ್ಕಾರಗಳು ಶಾಲಾ ಪಠ್ಯಗಳು ಬದಲಾಗುತ್ತದೆ, ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ ವರ್ಷಗಳ ಹಿಂದಕ್ಕೆ ಕರೆದುಕೊಂಡು ಹೋಗಿದೆ, ಅವರು ರೂಪಿಸಿದ್ದ ಪಠ್ಯದಲ್ಲಿ ಮಕ್ಕಳ ಭವಿಷ್ಯ ಇರಲಿಲ್ಲ, ಪಠ್ಯ ರಚನೆ ಸಮಿತಿ ನೇಮಕವಾಗಿದೆ.
ಹೊಸ ನಮ್ಮ ಕಾಂಗ್ರೆಸ್ ಸರ್ಕಾರ ಬಂದಿದ್ದು ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನೇ ಜಾರಿ ಮಾಡಬೇಕು. ಸಾವರ್ಕರ್, ಹೆಡ್ಗೆವಾರ್ ಎಂಬ ಹುಸಿ ದೇಶಭಕ್ತರ ಪಠ್ಯವನ್ನು ತೆಗೆಯಬೇಕು, ಯಾವ ಪಠ್ಯವನ್ನು ಬೋಧೀಸಬೇಕೆಂದು ಸರ್ಕಾರ ಕೂಡಲೇ ಸುತ್ತೋಲೆ ಹೊರಡಿಸಿಬೇಕು ಎಂದು ಆಗ್ರಹಿಸಿದರು.
ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ, ಭಾರತೀಯತೆ ಎಂದರೆ ಸಮಗ್ರತೆ, ಎಲ್ಲರನ್ನೂ ಒಳಗೊಳ್ಳುವ ಸಮಗ್ರತೆ ಒಳಗೊಳ್ಳಬೇಕು. ಆದ್ದರಿಂದ ಶಾಲಾ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಒಳ್ಳೆ ನಿರ್ಧಾರ ತೆಗೆದುಕೊಂಡಿದೆ ಎಂದರು.