Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ಬಳ್ಳಾರಿ: ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2023-24ನೇ ಶೈಕ್ಷಣಿಕ ವರ್ಷಕ್ಕಾಗಿ ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಮೆಟ್ರಿಕ್ ಪೂರ್ವ 5ನೇ ತರಗತಿಯಿಂದ 10ನೇ ತರಗತಿಯವರಿಗೆ, ಆದ್ಯತೆ ಹಾಗೂ ಅರ್ಹತೆ ಮೇರೆಗೆ ಮೆಟ್ರಿಕ್ ನಂತರದ ಪಿಯುಸಿ-1 ಮತ್ತು 1ರವರೆಗೆ ವಸತಿ ನಿಲಯದಲ್ಲಿ ಉಚಿತ ಪ್ರವೇಶವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಎಮ್.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ ೩೦ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ Sainikwelfaredwd@gmail.com ಮತ್ತು ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

——

RELATED ARTICLES
- Advertisment -
Google search engine

Most Popular