Saturday, April 12, 2025
Google search engine

Homeರಾಜ್ಯಸುದ್ದಿಜಾಲಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17) ಈಜಲು ಹೋಗಿ ಮೃತಪಟ್ಟಿದ್ದನು. ಧನುಷ್ ಎಂಬಾತನನ್ನ ರಕ್ಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಪ್ರವಾಸಿಗರ ಹುಚ್ಚಾಟಕ್ಕೆ ನಿರ್ಬಂಧ ವಿಧಿಸಲು ಮುಂದಾಗಿದ್ದಾರೆ.

ವೀಕೆಂಡ್ ಆದ್ದರಿಂದ ಹೆಚ್ಚು ಪ್ರವಾಸಿಗರು ಕಡಲ ತೀರಕ್ಕೆ ಆಗಮಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮುರುಡೇಶ್ವರ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಇದರಿಂದಾಗಿ ದಸರ ರಜೆ ವೀಕೆಂಡ್ ಎಂಜಾಯ್ ಮಾಡಲು ಬಂದ ಪ್ರವಾಸಿಗರ ಖುಷಿಗೆ ತಣ್ಣೀರು ಬಿದ್ದಿದ್ದು ಕಡಲ ತೀರ ಖಾಲಿ ಹೊಡೆಯುತ್ತಿದೆ.

ಪ್ರವಾಸೋದ್ಯಮ ನಂಬಿದವರಿಗೆ ನಷ್ಟ

ಇನ್ನೂ ಕಡಲ ತೀರ ಭಾಗದಲ್ಲಿ ಏಕಾಏಕಿ ನಿರ್ಬಂಧ ವಿಧಿಸಿದ್ದರಿಂದ ಪ್ರವಾಸೋದ್ಯಮ ಚಟುವಟಿಕೆ ನಂಬಿದವರು ಸಂಕಷ್ಟಕ್ಕೆ ಈಡಾಗುವಂತಾಗಿದೆ. ಬಹುತೇಕ ವ್ಯಾಪಾರಸ್ಥರು ವಾರಾಂತ್ಯದಲ್ಲಿ ಆಗುವ ವ್ಯಾಪಾರವನ್ನೇ ನಂಬಿ ಬದುಕುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ, ತೆರಿಗೆ ಸಹ ಪಾವತಿ ಮಾಡುತ್ತಿದ್ದಾರೆ. ಹೀಗಿರುವಾಗ ಹೀಗಿರುವಾಗ ಏಕಾಏಕಿ ನಿರ್ಬಂಧ ವಿಧಿಸಿದ್ದು ವ್ಯಾಪಾರಸ್ತರು ಸಂಕಷ್ಟಕ್ಕೀಡಾಗುವಂತಾಗಿದೆ.

ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಕಡಲ ತೀರದಲ್ಲಿ ಲೈಫ್ ಗಾರ್ಡ್‌ ಹಾಗೂ ಪೊಲೀಸ್‌ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಇದಕ್ಕೆ ಕೆಲ ಪ್ರವಾಸಿಗರು ಅಸಮಾಧಾನ ಹೊರಹಾಕಿದ್ದಾರೆ.

ಘಟನೆ ಹಿನ್ನೆಲೆ

ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳಿದ್ದರು. ಈ ವೇಳೆ ಮುರುಡೇಶ್ವರದ ಸಮುದ್ರಕ್ಕೆ ತೆರಳಿದ್ದ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ಹೋಗಿದ್ದರು. ಅಲೆಗಳ ಅಬ್ಬರಕ್ಕೆ ಗೌತಮ್ ಎಂಬ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದು, ಇನ್ನೊಬ್ಬ ವಿದ್ಯಾರ್ಥಿಯನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆದರೆ ಗೌತಮ್ ಕೂಡ ಈಜಲು ಬಂದಿದ್ದ ಎನ್ನುವ ವಿಷಯವನ್ನು ಧನುಷ್ ಹೇಳಿರಲಿಲ್ಲ.

ವಿದ್ಯಾರ್ಥಿಗಳ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ಬಳಿಕ ಮುರುಡೇಶ್ವರ ಎಸ್‌ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ಓಷಿಯನ್ ಅಡ್ವೆಂಚರ್ಸ್ ತಂಡದಿಂದ ಶೋಧ ನಡೆಸಲಾಯಿತು. ಆತನ ಶವವನ್ನು ಹೊರತೆಗೆಯಲಾಗಿದ್ದು, ಸಾವಿನಿಂದ ಪಾರು ಮಾಡಲಾಗಲಿಲ್ಲ. ರಕ್ಷಣೆಗೊಳಗಾದ ಧನುಷ್ RNS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುರಕ್ಷಿತವಾಗಿದ್ದಾನೆ.

RELATED ARTICLES
- Advertisment -
Google search engine

Most Popular