ಮೈಸೂರು: ಮೈಸೂರಿನ ಹೊರವಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಬೇಧಿಸಿದ್ದು, ಪ್ರಕರಣ ಪತ್ತೆ ಬಳಿಕ ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (೭೫) ಎಂಬುವರೇ ಕೊಲೆಯಾದ ವೃದ್ಧೆ. ಅವರ ಮೊಮ್ಮಗ ಸುಪ್ರೀತ್ (೨೩) ಎಂಬಾತನೇ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ ಆರೋಪಿ. ಕಳೆದ ಒಂದು ವಾರದ ಹಿಂದೆ ಮೈಸೂರು ತಾಲೂಕಿನ ಸಾಗರಕಟ್ಟೆ ಗ್ರಾಮದ ಬಳಿ ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಮೇ ೩೦ರಂದು ಸಂಜೆ ವೇಳೆ ನಡೆದಿದ್ದ ಘಟನೆ, ಮರುದಿನ ಬೆಳಕಿಗೆ ಬಂದಿತ್ತು. ಘಟನಾ ಸ್ಥಳಕ್ಕೆ ಮೈಸೂರಿನ ಇಲವಾಲ ಠಾಣೆ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದರು. ಆಗ ತPಣಕ್ಕೆ ಗುರುತು ಸಿಗದ ಕಾರಣ ಮಹಿಳೆಯ ಮೃತದೇಹವನ್ನು ಶವಗಾರಕ್ಕೆ ರವಾನಿಸಲಾಗಿತ್ತು. ಅಪರಿಚಿತ ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಲು ಪೋಲೀಸರು ಮುಂದಾಗಿದ್ದರು. ಮಹಿಳೆಯನ್ನು ಸಜೀವವಾಗಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿತ್ತು.
ಪ್ರಕರಣದ ಜಾಡು ಹಿಡಿದು ಸಾಗಿದ್ದ ಪೊಲೀಸರಿಗೆ ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ಸುಪ್ರೀತ್‌ನನ್ನು ವಿಚಾರಣೆಗೆ ಒಳಪಡಿಸಿದಾಗ, ಅಜ್ಜಿ ಸುಲೋಚನ ಬೈಯುತ್ತಿದ್ದರು, ಹಾಗಾಗಿ ಹತ್ಯೆ ಮಾಡಿದೆ ಎಂದು ತಿಳಿಸಿzನೆ. ಅಜ್ಜಿ ಸುಲೋಚನ ಅವರನ್ನು ಹತ್ಯೆ ಮಾಡಿದ ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾPನಲ್ಲಿ ಹಾಕಿ ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರು ಪ್ರದೇಶಕ್ಕೆ ಕೊಂಡೊಯ್ದು ಗುಂಡಿಯಲ್ಲಿ ಹಾಕಿ ಶವವನ್ನು ಸುಟ್ಟು ಹಾಕಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.