Friday, April 4, 2025
Google search engine

HomeUncategorizedವಸತಿ ಶಾಲೆಗಳಲ್ಲಿ ೬ ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಸತಿ ಶಾಲೆಗಳಲ್ಲಿ ೬ ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ದೊಡ್ಡ ಕಾನ್ಯ (ಸಿಬಿಎಸ್‌ಸಿ ಪಠ್ಯಕ್ರಮ) ಹಾಗೂ ಪಿರಿಯಾಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಶೈಕ್ಷಣಿಕ ವರ್ಷ ೨೦೨೩-೨೪ ರ ಸಾಲಿಗೆ ೬ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯದ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರು ಪ್ರತಿ ತಾಲ್ಲೂಕುಗಳಲ್ಲಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಮಾಹಿತಿ ಕೇಂದ್ರಕ್ಕೆ ಅಥವಾ ಸದರಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿಯನ್ನು ಅಥವಾ ದೂ.ಸಂ: ೦೮೨೧-೨೪೨೨೦೮೮/೯೬೩೨೪೦೪೩೧೪/೯೬೨೦೯೨೫೨೪೭ ವೆಬ್‌ಸೈಟ್ ವಿಳಾಸ: hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/mಥಿsuಡಿu ಅನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular