ಚಾಮರಾಜನಗರ: ವಿದ್ಯುತ್ ದರ ಹೆಚ್ಚಳ ಖಂಡಿಸಿ ಹಾಗೂ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿ?ಧ ಕಾಯ್ದೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನ ನಿರತರರು ಮೆರವಣಿಗೆ ಹೊರಟು, ವೀರಭದ್ರೇಶ್ವರ ದೇವಸ್ಥಾನ, ರಥ ಬೀದಿಯ ಮೂಲಕ ಭುವನೇಶ್ವರಿ ವೃತ್ತಕ್ಕೆ ತಲುಪಿ ಕೆಲಕಾಲ ರಸ್ತೆತಡೆ ನಡೆಸಿ, ವಿದ್ಯುತ್ ದರ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ ಕಾಂಗ್ರೆಸ್ ಸರ್ಕಾರ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಮೋಸದಿಂದ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ ಪ್ರಮುಖವಾಗಿ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕರಿಗೆ ಹೊರೆ ಮಾಡಿದೆ. ಈ ಕೂಡಲೇ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪವನ್ನು ವಾಪಸ್ ಪಡೆಯಬೇಕು. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿ?ಧ ಕಾಯ್ದೆಯನ್ನು ಮುಂದುವರಿಸಬೇಕು. ಯಾವುದೇ ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದ ಅವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕುವುದು ಅಕ್ಷಮ್ಯ ಅಪರಾಧವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಮಾನದಂಡ ವಿಲ್ಲದೆ ಯಥಾವತ್ತಾಗಿ ರಾಜ್ಯದ ಜನತೆಗೆ ತಲುಪಿಸಬೇಕು. ಗೃಹಜ್ಯೋತಿ ಯೋಜನೆಯಲ್ಲಿ ೨೦೦ ಯುನಿಟ್ ಬಳಕೆಗೆ ಪೂರ್ಣ ಪ್ರಮಾಣ ಅವಕಾಶ ಕೊಡಬೇಕು. ಯಾವುದೇ ಮಾನದಂಡ ಹಾಕಬಾರದು ಎಂದರು.
ನಿರುದ್ಯೋಗ ಭತ್ಯೆಯನ್ನು ಎಲ್ಲರಿಗೂ ಕೊಡುವುದಾಗಿ ಈ ಮುಂಚೆ ಘೋಷಿಸಿದ್ದು, ಈಗ ೨೦೨೨-೨೩ ನೇ ಸಾಲಿಗೆ ಮಾತ್ರ ಸಿಮೀತಗೊಳಿಸಿ ಘೋ?ಣೆ ಮಾಡುವುದು ಸರಿಯಲ್ಲ. ಕೇವಲ ಒಂದೇ ವ?ದಲ್ಲಿ ನಿರುದ್ಯೋಗಿ ಹೇಗೆ ಆಗುತ್ತಾನೆ. ೫ ವ?ಗಳಿಂದ ನೌಕರಿ ಸಿಗದೆ ಇರುವ ನಿರುದ್ಯೋಗಿಗಳಿಗೆ ೧೦ ವ?ಗಳ ಕಾಲ ನಿರುದ್ಯೋಗ ಭತ್ಯೆ ಕೊಡುವ ಕೆಲಸ ಆಗಬೇಕು. ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ೨ ಸಾವಿರ ವಿತರಣೆಯಲ್ಲಿ ಮಾನದಂಡ ಮಾಡುವ ಮೂಲಕ ಮನೆಯಲ್ಲಿ ಗೃಹಲಕ್ಷ್ಮಿಯರೇ ಜಗಳ ಆಡುವಂತಾಗಿದೆ. ಆದರಿಂದ ಎಲ್ಲ ಮನೆ ಯಜಮಾನಿಗೂ ಅತ್ತೆ, ಸೊಸೆ ಎನ್ನದೇ ವಿವಾಹವಾಗಿದ್ದು ಪಡಿತರ ಚೀಟಿ ಹೊಂದಿರುವ ಎಲ್ಲರಿಗೂ ಕಡ್ಡಾಯವಾಗಿ ೨ ಸಾವಿರ ವಿತರಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಅನು?ನಗೊಳಿಸುವ ತನಕ ಬಿಜೆಪಿ ಹೋರಾಟ ಮಾಡುತ್ತದೆ ಎಚ್ಚರಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾರಾಯಣಪ್ರಸಾದ್ ಮಾತನಾಡಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿರುವ ವಿರುದ್ದ ಕರ್ನಾಟಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಕೂಡ ಪ್ರತಿಭಟನೆ ನಡೆಸಲಾಗಿದೆ. ಗೋವುಗಳನ್ನು ಸಂರಕ್ಷಣೆ ಮಾಡಬೇಕಾದ ಪಶುಸಂಗೋಪನಾ ಸಚಿವರೇ ಹಸುಗಳನ್ನು ಯಾಕೆ ಕಡಿಯಬಾರದು ಎಂದು ಹೇಳಿರುವುದು ಬಹಳ ವಿ?ಧಕರ ಸಂಗತಿಯಾಗಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ವಿರುದ್ದ ಬಿಜೆಪಿ ನಿರಂತರ ಹೋರಾಟ ಮಾಡುತ್ತದೆ ಎಂದರು.
ಪ್ರತಿಭಟನೆಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮುಖಂಡರಾದ ಡಾ.ಎ.ಆರ್.ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀಪ್ರತಾಪ್, ಕೆರೆಹಳ್ಳಿ ಮಹದೇವಸ್ವಾಮಿ, ಉಪಾಧ್ಯಕ್ಷ ಪಿ.ವೃ?ಬೇಂದ್ರಪ್ಪ, ಮಾಜಿ ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್, ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ನಗರ ಮಂಡಲ ಅಧ್ಯಕ್ಷ ರಾಜು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರಣಯ್, ಉಪಾಧ್ಯಕ್ಷ ಶಿವುವಿರಾಟ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ ಕಾರ್ಯದರ್ಶಿ ಸರಸ್ವತಿ, ಪಣ್ಯದಹುಂಡಿ ಸತೀಶ್, ಬುಲೆಟ್ ಚಂದ್ರು, ಕೆ.ವೀರಭದ್ರಸ್ವಾಮಿ, ವೇಣುಗೋಪಾಲ್, ಮಹೇಶ್, ನಾಗೇಂದ್ರಬಾಬು, ಪಿ.ರಂಗಸ್ವಾಮಿ, ದೇಶಿಗೌಡನಪುರ ಪರಶಿವಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.