Friday, April 4, 2025
Google search engine

Homeಬ್ರೇಕಿಂಗ್ ನ್ಯೂಸ್ವಿದ್ಯುತ್ ದುಂದುವೆಚ್ಚ ಮಾಡುವಂತೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ: ಸಿಎಂ ಸಿದ್ದರಾಮಯ್ಯ

ವಿದ್ಯುತ್ ದುಂದುವೆಚ್ಚ ಮಾಡುವಂತೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಕಷ್ಟದಲ್ಲಿರುವ ರಾಜ್ಯದ ಬಡ ವರ್ಗದ ಜನರು ಮತ್ತು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ.10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಿದ್ದೇವೆ. ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ 2023 ಅನ್ನು ಉದ್ಘಾಟಿಸಿ, ಮಾತನಾಡುತ್ತಾ ಬಿಜೆಪಿ ವಿರುದ್ಧ ಕಿಡಿಕಾರಿದರು.

ನಾವೂ ವಿದ್ಯುತ್ ಬಳಕೆಗೆ ಸರಾಸರಿ ಮೇಲೆ ಶೇ.10 ರಷ್ಟು ಹೆಚ್ಚಿನ ಅವಕಾಶ ಕೊಟ್ಟಿದ್ದೇವೆ. ಆದರೆ ವಿಪಕ್ಷದವರು 200 ಯುನಿಟ್ ಬಳಸಿ, ಬಿಲ್ ಕಟ್ಟಬೇಡಿ ಎಂದು ಹೇಳುತ್ತಾ ಬರುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಜನರನ್ನು ತಪ್ಪು ದಾರಿಗೆ ಎಳೆಯುವುದು ಸರಿಯಾ? ಮಿತವಾಗಿ ವಿದ್ಯುತ್ ಬಳಸಿ ಎನ್ನುವುದು ತಪ್ಪಾ? ಅಗತ್ಯಕ್ಕಿಂತ ಹೆಚ್ಚಿನ ವಿದ್ಯುತ್ ಏಕೆ ಬಳಸುತ್ತೀರಾ? ಎಂದು ಸಿಎಂ ಪ್ರಶ್ನಿಸಿದರು.

ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ: ಸಂಪನ್ಮೂಲಗಳನ್ನು ಬಳಸುವಾಗ ಮನುಷ್ಯರಿಗೆ ವಿವೇಕ ಇರಬೇಕು. ನಮ್ಮ ಸುತ್ತಮುತ್ತಲಿನ ಜನರು ಬದುಕಬೇಕು ಎಂಬ ಅರಿವು ಮುಖ್ಯ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಕೆಲ ಮಿತಿಗಳನ್ನು ಹೇರುವುದು ಅಗತ್ಯ. ವಿದ್ಯುತ್ ದುಂದುವೆಚ್ಚ ದುರುಪಯೋಗ ಮಾಡುವಂತೆ ಜನರಿಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ಇದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular