ಯಳಂದೂರು : ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಹಲವಾರು ವರ್ಷಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ಹಾಗೂ ಪ್ರಗತಿಪರ ಹೋರಾಟಗಾರರು ದಲಿತ ಚಳುವಳಿ ಹಾಗೂ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿ ಪ್ರಸ್ತುತ ಕರ್ನಾಟಕ ರಾಜ್ಯ ಸಂವಿಧಾನ ಸಂರಕ್ಷಣ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಕೆಪಿಸಿಸಿ ಸಂಯೋಜಕರಾಗಿ ಸೇವೆ ಸಲ್ಲಿಸಿ ಸಾಕಷ್ಟು ಜನಾನುರಾಗಿಯಾಗಿರುವ ಮೈಸೂರಿನ ಅಶೋಕಪುರಂನ ನಿವಾಸಿ ಎನ್ ಭಾಸ್ಕರ್‌ರವರಿಗೆ ಮುಂಬರುವ ವಿಧಾನಪರಿಷತ್‌ನ ಚುನಾವಣೆಯಲ್ಲಿ ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕೆಂದು ಯಳಂದೂರು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಹೊನ್ನೂರು ನಿರಂಜನ್ ಹಾಗೂ ದೊಡ್ಡ ಕೌಲಂದೆ ಗ್ರಾಮದ ಕಾಂಗ್ರೆಸ್ ವಕ್ತಾರರಾದ ನಾಗೇಶ್‌ರವರು ಒತ್ತಾಯಿಸಿದ್ದಾರೆ.
ಪ್ರಸ್ತುತ ಜನಸೇವೆಯಲ್ಲಿ ತೊಡಗಿಕೊಂಡಿರುವ ಭಾಸ್ಕರ್‌ರವರು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಎಲ್ಲಾ ಸಮುದಾಯದ ಜನಸಾಮಾನ್ಯರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದಾರೆ. ಕಳೆದ ನಾಲ್ಕು ದಶಕಗಳಿಂದಲೂ ಕೂಡ ಪ್ರಗತಿಪರ ಹೋರಾಟಗಾರರಾಗಿ ದಲಿತ ಚಳುವಳಿ ಹಾಗೂ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿರುವುದರ ಜೊತೆಗೆ ಅನೇಕ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾಗಿದ್ದಾರಲ್ಲದೇ ಪಕ್ಷದ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿ ಬಹಳಷ್ಟು ಜನಾನುರಾಗಿಯಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಅವರನ್ನು ವಿಧಾನಪರಿಷತ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಲ್ಲಿ ಯಳಂದೂರು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಹೊನ್ನೂರು ನಿರಂಜನ್ ಹಾಗೂ ದೊಡ್ಡ ಕೌಲಂದೆ ಗ್ರಾಮದ ಕಾಂಗ್ರೆಸ್ ವಕ್ತಾರರಾದ ನಾಗೇಶ್‌ರವರು ಒತ್ತಾಯಿಸಿದ್ದಾರೆ. ಇವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವುದರಿಂದ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಸಾಕಷ್ಟು ಅನುಕೂಲಕರವಾಗಲಿದೆ ಎಂದು ನಿರಂಜನ್ ಹಾಗೂ ನಾಗೇಶ್ ಅಭಿಪ್ರಾಯ ಪಟ್ಟಿದ್ದಾರೆ.