ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಇವರ ಸಂಯುಕ್ತಾಶ್ರಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂ.23 ರಂದು ಬೆಳಗ್ಗೆ 09 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸಹಕರಿಸಿದ ಆಯೋಜಕ ಸಂಸ್ಥೆಗೆ ಅದೇ ದಿನದಂದು ಬೆಳಗ್ಗೆ 10 ಕ್ಕೆ ಜಿಲ್ಲಾ ಆಸ್ಪತ್ರೆಯ ಆವರಣದ ಕೋವಿಡ್ ವ್ಯಾಕ್ಸಿನ್ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದ್ದಾರೆ.
ಜಾಥಾವು ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಮ್ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆಯಲಿದೆ.