Friday, April 4, 2025
Google search engine

Homeಅಪರಾಧಸಿರುಗುಪ್ಪ: ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ

ಸಿರುಗುಪ್ಪ: ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ

ಬಳ್ಳಾರಿ, ಜೂನ್, 06: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಸುದೀಕ್ಷಾ ಇಂಟರ್‌ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಸದ್ಯ ಅದೃಷ್ಟವಶಾತ್ ಯಾವುದೇ ವಿದ್ಯಾರ್ಥಿಗೆ ಹಾನಿಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಕಾರ್ಯ ನಿರ್ವಹಿಸುತ್ತಿದ್ದು, ಎಂದಿನಂತೆ ಮಂಗಳವಾರ (ಜೂನ್‌ 06) ಬೆಳಗ್ಗೆಯಿಂದ ಎಲ್ಲಾ ತರಗತಿಗಳಲ್ಲಿ ಪಾಠಗಳು ನಡೆಯುತ್ತಿದ್ದವು. ಆದರೆ ವಿದ್ಯುತ್ ಪೂರೈಕೆ ಸ್ಥಗಿತವಾದ್ದರಿಂದ ಶಾಲೆಯ ಜನರೇಟರ್ ಆನ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜನರೇಟರ್ ಕೊಠಡಿಯಲ್ಲಿನ ವಿದ್ಯುತ್ ವೈರ್‌ಗಳಲ್ಲಿ ಮೊದಲು ಬೆಂಕಿ ಹತ್ತಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಇನ್ನು ಜನರೇಟರ್ ಕೊಠಡಿಯಲ್ಲಿ ಹೊಗೆ ಮತ್ತು ಬೆಂಕಿ ಕಾಣುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿಗಳು ತಕ್ಷಣ ಎಲ್ಲ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ಕಟ್ಟಡದ ಹಿಂಬಾಗಿಲಿನಿಂದ ಸುರಕ್ಷಿತವಾಗಿ ಸುಮಾರು 150ಕ್ಕೂ ಹೆಚ್ಚು ವಿಧ್ಯಾರ್ಥಿಗಳನ್ನು ಕಟ್ಟಡದಿಂದ ಹೊರ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊನೆಗೆ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular