ಮೈಸೂರು: ಮೈಸೂರು ವಿವಿ ಮಾನಸಗಂಗೋತ್ರಿಯಲ್ಲಿರುವ ಡಾ.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸಲು ಆಗ್ರಹಿಸಿ ಹಾಸ್ಟೆಲ್‌ನ ವಿದ್ಯಾರ್ಥಿಗಳು ಕ್ರಾಫರ್ಡ್ ಹಾಲ್ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.
ಕೆಲಕಾಲ ಕ್ರಾಫರ್ಡ್ ಹಾಲ್ ಮುಂಭಾಗದ ರಸ್ತೆತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು, ಹಾಸ್ಟೆಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಳಪೆ ಗುಣಮಟ್ಟದ ಆಹಾರ, ಶೌಚಾಲಯದ ಕೊರತೆ, ಗ್ರಂಥಾಲಯದ ಕೊರತೆ, ಹಾಸ್ಟೆಲ್ ಆವರಣದಲ್ಲಿ ಸ್ವಚ್ಛತೆ ಕೊರತೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಕಳೆದ ೬ ತಿಂಗಳಿಂದ ಹಾಸ್ಟೆಲ್‌ನ ಕುಡಿಯುವ ನೀರಿನ ಟ್ಯಾಂಕರ್ ಕೆಟ್ಟು ಹೋಗಿದ್ದು, ಅದನ್ನು ಸರಿಪಡಿಸುವಂತೆ ಹಲವು ಬಾರಿ ಅಽಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ, ಹಾಸ್ಟೆಲ್‌ಗೆ ಖುದ್ದು ಕುಲಪತಿಯವರು ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.