ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು 14 ನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸೇರಿದಂತೆ ಶ್ರೀಸಾಮಾನ್ಯರಿಗೆ ಪ್ರಮುಖ ಕೊಡುಗೆಗಳನ್ನು ನೀಡಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಇ- ಕಾಮರ್ಸ್ ಡೆಲಿವರಿ ಬಾಯ್‌ಗಳಿಗೆ ಸಿದ್ದರಾಮಯ್ಯನವರು ಜೀವ ಹಾಗೂ ಅಪಘಾತ ವಿಮೆಯನ್ನು ಘೋಷಿಸಿದ್ದಾರೆ. ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಸೇರಿದಂತೆ ಇತ್ಯಾದಿಗಳಲ್ಲಿ ಕೆಲಸ ಮಾಡುವ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ ರೂ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದು ರೂ 2 ಲಕ್ಷ ಜೀವ ವಿಮೆ ಮತ್ತು ರೂ 2 ಲಕ್ಷ ಅಪಘಾತ ವಿಮೆಯನ್ನು ಒಳಗೊಂಡಿದೆ. ಇದು ಪೂರ್ನ ಸಮಯ ಹಾಗೂ ಅರೆಕಾಲಿಕ ಡೆಲಿವರಿ ಬಾಯ್‌ಗಳನ್ನು ಒಳಗೊಂಡಿದೆ.