Tuesday, April 22, 2025
Google search engine

Homeರಾಜ್ಯಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ ಜಮೆಯ ವಿಚಾರವಾಗಿ 2 ಕಂತಿನ ಹಣವನ್ನು ಕ್ಲಿಯರ್ ಮಾಡಿದ್ದೇವೆ. ನಾವು ಕೊಟ್ಟ ಭರವಸೆಯಂತೆ ಎರಡು ತಿಂಗಳ ಹಣವನ್ನು ಹಾಕಿದ್ದೇವೆ. 1.22 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ.ಎರಡು ತಿಂಗಳಿಗೆ 5000 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. 80000 ಫಲಾನುಭವಿಗಳಿಗೆ ತಾಂತ್ರಿಕ ದೋಷ ಅಂತ ಬರುತ್ತಿದೆ. ಜಿಎಸ್​ಟಿ ಐಟಿ ಇಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಹಣ ಹಾಕಲು ಆಗುತ್ತಿಲ್ಲ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular