Friday, April 11, 2025
Google search engine

Homeಅಪರಾಧಯಲ್ಲಾಪುರದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವು

ಯಲ್ಲಾಪುರದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವು

ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ.

ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​ ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಈ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಮೃತಪಟ್ಟವರು ಹಾವೇರಿಯ ಸವಣೂರು ಮೂಲದವರು ಎನ್ನಲಾಗಿದೆ.

ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರೇನ್ ಮೂಲಕ ಶವಗಳನ್ನು ಹೊರತೆಗೆದಿದ್ದಾರೆ.

RELATED ARTICLES
- Advertisment -
Google search engine

Most Popular