Thursday, April 17, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ 10 ಸಾವಿರ ರೂ. ದಂಡ ವಿಧಿಸಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ವೇಳೆ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದ್ದರು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿಸಲ್ಲಿದ್ದು, ಅರ್ಜಿ ವಜಾಗೊಳಿಸಿದ ನ್ಯಾ. ಎಸ್ ದೀಕ್ಷಿತ್ ಅವರ ಪೀಠ ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ.

ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್‌ ಹಾಕಲಾಗುತ್ತದೆ ಎಂದಿರುವ ಕೋರ್ಟ್ ಸಿಎಂ ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ನೀಡಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular