Saturday, April 19, 2025
Google search engine

Homeರಾಜ್ಯಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ

ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ

ಬೆಂಗಳೂರು: ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ತಡೆ) ಸುಗ್ರೀವಾಜ್ಞೆ 2025 ರ ಪರಿಷ್ಕೃತ ಕರಡನ್ನು ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿದ್ದು, ಕಾನೂನು ಉಲ್ಲಂಘನೆಗಾಗಿ ದೀರ್ಘಾವಧಿ ಶಿಕ್ಷೆಯನ್ನು ಒಳಗೊಂಡಿದೆ.

ಗರಿಷ್ಠ ಶಿಕ್ಷೆಯ ಪ್ರಮಾಣವನ್ನು ಮೂರು ವರ್ಷದಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಶಿಕ್ಷೆಯ ಅವಧಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ಟಿಎನ್‌ಐಇಗೆ ತಿಳಿಸಿವೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲವಾಗಿರುವ ಗುಂಪುಗಳು ಮತ್ತು ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಪರಿಹಾರ ನೀಡಲು ಸಿದ್ದರಾಮಯ್ಯ ಸಂಪುಟ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ.

ಕಠಿಣ ಕಾನೂನಿನ ಪ್ರಮುಖ ಅಂಶಗಳು ಇಂತಿವೆ: ಸುಗ್ರೀವಾಜ್ಞೆಯ ಸೆಕ್ಷನ್ 8 ಅನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಆರು ತಿಂಗಳಿಗಿಂತ ಕಡಿಮೆಯಿಲ್ಲದ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ರೂ 5 ಲಕ್ಷದವರೆಗೆ ವಿಸ್ತರಿಸಬಹುದಾದ ದಂಡದೊಂದಿಗೆ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶಿಕ್ಷೆಗೆ ಗುರಿಪಡಿಸುತ್ತಾರೆ. ಈ ಸುಗ್ರೀವಾಜ್ಞೆಯ ಅಡಿಯಲ್ಲಿನ ಅಪರಾಧಗಳು ಜಾಮೀನು ರಹಿತವಾಗಿರುತ್ತವೆ.

ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಯಾವುದೇ ಬಲವಂತದ ಕ್ರಮವನ್ನು ಸ್ವತಃ ಅಥವಾ ಏಜೆಂಟ್‌ಗಳ ಮೂಲಕ ಬಳಸುವಂತಿಲ್ಲ. ಯಾವುದೇ ರೀತಿಯ ಬಲವಂತದ ವಸೂಲಾತಿಯು ಸುಗ್ರೀವಾಜ್ಞೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷೆಗೆ ಕಾರಣವಾಗುತ್ತದೆ. ನೋಂದಣಿ ಪ್ರಾಧಿಕಾರವು ಅಂತಹ ಕಂಪನಿಗಳ ನೋಂದಣಿಯನ್ನು ಅಮಾನತುಗೊಳಿಸಬಹುದು ಅಥವಾ ರದ್ದುಗೊಳಿಸಬಹುದು.

RELATED ARTICLES
- Advertisment -
Google search engine

Most Popular