Friday, April 18, 2025
Google search engine

Homeರಾಜ್ಯಸುದ್ದಿಜಾಲಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ

ಮಂಡ್ಯ: ಕರ್ನಾಟಕ ಸರ್ಕಾರವನ್ನು ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು ೧೦೦ ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.

ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಬ್ರೋಕರ್‌ಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ. ನಿತ್ಯ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷಿ ಕಲೆ ಹಾಕುತ್ತಿದ್ದೇವೆ, ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಸಿಎಂ ಸ್ಟ್ರಾಂಗ್ ಇದ್ದಾರೆ, ಅವರ ಪರ ನಾವೆಲ್ಲರೂ ಇದ್ದೇವೆ. ರಾಜ್ಯಪಾಲರ ನಡೆ ವಿರುದ್ಧ ೧೩೬ ಶಾಸಕರು ಒಗ್ಗಟ್ಟಾಗಿ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳನ್ನು ಸಿಲುಕಿಸಲು ಆಟವಾಡುತ್ತಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ಬಿಜೆಪಿಯಲ್ಲೇ ಒಡಕು ಉಂಟಾಗಿದೆ. ಬಿಎಸ್?ವೈ, ವಿಜಯೇಂದ್ರ, ಯತ್ನಾಳ್, ಹೆಚ್.ಡಿಕೆ ನಡುವೆ ಕಿತ್ತಾಟವಿದೆ ಎಂದು ತಿಳಿಸಿದರು.

ರಾಜ್ಯಪಾಲರು ದೆಲಿಗೆ ಹೋದಾಗ ಅಮಿತ್ ಷಾ, ಕುಮಾರಸ್ವಾಮಿ, ದೇವೇಗೌಡ ಅವರನ್ನು ಭೇಟಿಯಾದರು. ಮರುದಿನ ಬೆಳಿಗ್ಗೆ ಬಂದು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಇದು ಸಂವಿಧಾನ ಬಾಹಿರವಾಗಿದೆ. ರಾಜ್ಯಪಾಲರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರ ನಡೆ ವಿರುದ್ಧ ನಾವೀದ್ದೇವೆ. ೧೩೬ ಸೀಟ್ ಗೆದ್ದಿದ್ದೇವೆ ಅದಕ್ಕೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

RELATED ARTICLES
- Advertisment -
Google search engine

Most Popular