ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ 120 ಅಡಿ ದಾಟಿದ್ದು, ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ನೆನ್ನೆ ಸಂಜೆಯಿಂದಲೇ ಪ್ಲಸ್ 80 ಗೇಟ್ ಮೂಲಕ ಸುಮಾರು 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿತ್ತು.
ಪ್ರಸ್ತುತ ಕೆ.ಆರ್.ಎಸ್ ಡ್ಯಾಂ ನಿಂದ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ಡ್ಯಾಂಗೆ 60 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಆದ ಕಾರಣ ಜಲಾಶಯದ ಸುರಕ್ಷತಾ ದೃಷ್ಟಿಯಿಂದ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಕೆಳಗಿನ ನದಿ ಪಾತ್ರದಲ್ಲಿ ಪ್ರವಾಹ ಬೀತಿ ಉಂಟಾಗಿದೆ.
ಕಾವೇರಿ ನೀರಾವರಿ ನಿಗಮದ ಸಿಬ್ಬಂದಿಗಳು ಪೂಜೆ ಸಲ್ಲಿಸುವ ಮೂಲಕ ಗೇಟ್ ಗಳನ್ನ ಮೇಲೆತ್ತಿದ್ದರು.

ನದಿಗೆ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮ ಪ್ರಕಟಣೆ ಹೊರಡಿಸಿತ್ತು. ನದಿ ಪಾತ್ರದ ಜನರಿಗೂ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.