ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ಹುಲಿ ಮೇಲೆ ಕುಳಿತ್ತಿರುವ ಶ್ರೀ ಮಹದೇಶ್ವರ ಪ್ರತಿಮೆಯನ್ನು ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡುವ ಸಲುವಾಗಿ ಜಿಲ್ಲಾಧಿಕಾರಿ ಶಿಲ್ಪನಾಗ್ ರವರು ಸ್ಥಳ ಪರಿಶೀಲನೆ ನಡೆಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಬೃಹತ್ ಮಹದೇಶ್ವರ ಪ್ರತಿಮೆ ವೀಕ್ಷಣೆಗೆ ಆಗ್ರಹಿಸಿ ಸಾರ್ವಜನಿಕರು ಮತ್ತು ರೈತರು ನಿರಂತರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಖುದ್ದಾಗಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪನಾಗ್ ರವರು ಮಹದೇಶ್ವರ ಬೆಟ್ಟದ ದೀಪದ ಒಡ್ಡುವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸಾಲೂರು ಮಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಅಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.