Wednesday, April 9, 2025
Google search engine

Homeಅಪರಾಧಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

ಕಲಬುರಗಿ: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.

ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular