ಬೆಂಗಳೂರು: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈಗೆ ತೆದುಕೊಂಡ ಕರವೇ ನಾರಾಯಣಗೌಡ ಸೇರಿ ೨೯ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಸದ್ಯ ಜನವರಿ ೧೦ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ೨೯ ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿ ಶಿಫ್ಟ್ ಮಾಡಲಾಗುತ್ತಿದೆ.
ಫಲಕದಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಕರವೇ ನಡೆಸಿದ ಪ್ರತಿಭಟನೆ ವೇಳೆ ನಾರಾಯಣಗೌಡ ಸೇರಿ ೨೯ ಕರವೇ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಒಪ್ಪಿಸಿದ್ದು ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ಎಒಈಅ ಕೋರ್ಟ್ ಜಡ್ಜ್ ಕರವೇ ಕಾರ್ಯಕರ್ತರಿಗೆ ಜನವರಿ ೧೦ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಇಲ್ಲದ ನಾಮಫಲಕ ಕಿತ್ತೊಗೆಯುತ್ತೇವೆ. ನಮ್ಮ ನಾಡಿನ ಇತಿಹಾಸಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಪೊಲೀಸರ ಮೇಲೆ ನಾವು ಹಲ್ಲೆ ಮಾಡಿದ್ದೇವೆ ಅನ್ನೋದು ಸುಳ್ಳು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದನ್ನು ತೋರಿಸಿ. ನಮ್ಮ ಪೊಲೀಸರ ಮೇಲೆ ನಮಗೆ ಗೌರವ ಹಾಗೂ ಕಳಕಳಿ ಇದೆ. ಸಿದ್ದರಾಮಯ್ಯ ಕನ್ನಡಪ್ರೇಮಿ ಎಂದು ಅವರಿಗೆ ಬೆಂಬಲ ನೀಡಿದ್ದೆವು ಎಂದು ಆಕ್ರೋಶ ಹೊರ ಹಾಕಿದ್ದಾರೆ.