ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ , ಕಾಂಗ್ರೆಸ್ ಪಕ್ಷ ರಾಷ್ಟ್ರನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ ಧ್ವನಿಯಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಆಶಯಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಮಹನೀಯರ ತ್ಯಾಗ, ಬಲಿದಾನ ಸ್ಮರಣೀಯ ಎಂದು ಹೇಳಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ ಧನಂಜಯ, ನಿಗಮ ಅಧ್ಯಕ್ಷರಾದ ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್ ದಾಸ್, ಮಮತಾ ಗಟ್ಟಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಕೆ.ಅಶ್ರಫ್, ಡಿಸಿಸಿ ಉಪಾಧ್ಯಕ್ಷರಾದ ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಡೆನ್ನಿಸ್ ಡಿಸಿಲ್ವ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳಾದ ಎಸ್.ಅಪ್ಪಿ, ಅಬ್ಬಾಸ್ ಅಲಿ, ಮನೋರಾಜ್ ರಾಜೀವ್, ಮ.ನ.ಪಾ ಮಾಜಿ ಸದಸ್ಯ ನವೀನ್ ಡಿಸೋಜಾ, ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಕಾಸ್ ಶೆಟ್ಟಿ, ಟಿ.ಕೆ.ಸುಧೀರ್, ಲಕ್ಷ್ಮಿ ನಾಯರ್, ಶಬೀರ್ ಸಿದ್ದಕಟ್ಟೆ, ಇ.ಕೆ.ಹುಸೈನ್, ಸಮೀರ್ ಮುಡಿಪು, ಮುಖಂಡರಾದ ಭಾಸ್ಕರ್ ರಾವ್, ಸತೀಶ್ ಪೆಂಗಲ್, ಮೋಹನ್ ದಾಸ್ ಕೊಟ್ಟಾರಿ, ರವಿ ಪೂಜಾರಿ, ಉದಯ್ ಕುಂದರ್, ಮಲ್ಲಿಕಾರ್ಜುನ ಕೋಡಿಕಲ್, ನೀತು, ಅನಿತಾ, ಫಯಾಝ್ ಅಮ್ಮೆಮ್ಮಾರ್, ಸಮರ್ಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜಾ ಧ್ವಜರಕ್ಷಕರಾಗಿ ನಿರ್ವಹಿಸಿದರು.



