Friday, April 18, 2025
Google search engine

HomeUncategorizedರಾಷ್ಟ್ರೀಯಭಾರಿ ಮಳೆಗೆ 145 ಬಲಿ: ಉತ್ತರಾಖಾಂಡ್, ಹರಿಯಾಣದಲ್ಲಿ ಭಾರಿ ಮಳೆ ಎಚ್ಚರಿಕೆ

ಭಾರಿ ಮಳೆಗೆ 145 ಬಲಿ: ಉತ್ತರಾಖಾಂಡ್, ಹರಿಯಾಣದಲ್ಲಿ ಭಾರಿ ಮಳೆ ಎಚ್ಚರಿಕೆ

ನವದೆಹಲಿ: ಉತ್ತರ ಭಾರತ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ದೇಶದಲ್ಲಿ ಮಳೆ ಪ್ರಾರಂಭವಾದಾಗಿನಿಂದ ಇದುವರೆಗೂ 145 ಕ್ಕೂ ಹೆಚ್ಚು ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಗುಡ್ಡಗಾಡು ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಮತ್ತೆ ಮುಂದುವರಿದಿದ್ದು, ಹಲವಾರು ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಮಳೆ ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ 91 ಮಂದಿ ಮೃತಪಟ್ಟಿದ್ದರೆ, ಉತ್ತರ ಪ್ರದೇಶದಲ್ಲಿ 14, ಹರಿಯಾಣದಲ್ಲಿ 16, ಪಂಜಾಬ್‌ ನಲ್ಲಿ 11 ಮತ್ತು ಉತ್ತರಾಖಂಡದಲ್ಲಿ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಉತ್ತರಾಖಂಡ್ ಮತ್ತು ಹರಿಯಾಣದಲ್ಲಿ ಇಂದೂ ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದ್ದು, ಜುಲೈ 14 ರವರೆಗೆ ಕೆಂಪು ಕೋಟೆಗೆ ಪ್ರವಾಸಿಗರ ಪ್ರವೇಶವನ್ನು  ನಿರ್ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular