Friday, April 4, 2025
Google search engine

Homeಅಪರಾಧನರೇಗಾದಲ್ಲಿ ೧೫೦ ಕೋಟಿ ಅಕ್ರಮ ೩೨ ಪಿಡಿಒಗಳ ಅಮಾನತು

ನರೇಗಾದಲ್ಲಿ ೧೫೦ ಕೋಟಿ ಅಕ್ರಮ ೩೨ ಪಿಡಿಒಗಳ ಅಮಾನತು

ರಾಯಚೂರು: ೨೦೨೦ರಿಂದ ೨೦೨೩ರ ಅವಧಿಯಲ್ಲಿನ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪಂಚಾಯ್ತಿ ಸಿಇಒ ಪಿ. ರಾಹುಲ್ ತುಕಾರಾಂ ಅವರು ದೇವದುರ್ಗ ತಾಲೂಕಿನ ೩೨ ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ನರೇಗಾ ಯೋಜನೆಯಲ್ಲಿ ೧೫೦ ಕೋಟಿ ರೂಪಾಯಿಗೂ ಹೆಚ್ಚಿನ ಅಧಿಕ ಹಣ ಅಕ್ರಮ ನಡೆದಿರುವುದು ಲೆಕ್ಕ ಪರಿಶೋಧನಾ ಸಮಿತಿಯ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇನ್ನು ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ಎಫ್‌ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಜಾಲಹಳ್ಳಿ ಪಿಡಿಒ ಪತ್ತೆಪ್ಪ ರಾಠೋಡ, ಶಾವಂತಗೇರ ಪಿಡಿಒ ಗುರುಸ್ವಾಮಿ, ಕ್ಯಾದಿಗೇರ ಪಿಡಿಒ ಸಿ.ಬಿ.ಪಾಟೀಲ್, ಗಾಣದಾಳ ಪಿಡಿಒ ಮಲ್ಲಪ್ಪ ಎಂಬ ನಾಲ್ಕು ಪಿಡಿಒಗಳನ್ನು ಅಮಾನತು ಮಾಡಲಾಗಿತ್ತು. ದೇವದುರ್ಗ ತಾಲ್ಲೂಕಿನ ೩೩ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಂಡ ಒಟ್ಟು ೫,೩೮೫ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದ್ದು ಸುಮಾರು ೧೦೦ ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಉಳಿದಂತೆ ೩೨ ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಸಾಮಾಗ್ರಿಗಳನ್ನು ಒಂದೇ ಸಂಸ್ಥೆಯಲ್ಲಿ ಖರೀದಿಸಲಾಗಿದೆ. ಒಟ್ಟು ೧೦೨.೩೨ ಕೋಟಿ ರೂಪಾಯಿಯನ್ನು ಮಾರುತೇಶ್ವರ ಎಂಟರ್ ಪ್ರೈಸಸ್ ಅನ್ನೋ ಒಂದೇ ಸಂಸ್ಥೆಗೆ ಪಾವತಿಸಿರುವುದು ಬೆಳಕಿಗೆ ಬಂದಿತ್ತು. ಇದರಿಂದ ಈ ಪ್ರಕಟಣದಲ್ಲಿ ಭಾಗಿಯಾದ ಒಟ್ಟು ೩೨ ಪಿಡಿಒ ಗಳನ್ನು ಇದೀಗ ಅಮಾನತು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular