ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಸ್ ಡಿಪಿಐ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ವಿವಿಧೆಡೆ ಸರಳವಾಗಿ ಆಚರಿಸಲಾಯಿತು. ಅದರಂತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಕಲ್ಲೇರಿ ಜಂಕ್ಷನ್ ನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಬ್ಲಾಕ್ ಸಮಿತಿ ಅಧ್ಯಕ್ಷ ಫೈಝಲ್ ಮೂರುಗೋಳಿ ವಹಿಸಿದ್ದರು. ಧ್ವಜಾರೋಹಣವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಇನಸ್ ರೋಡ್ರಿಗಸ್ ನೆರವೇರಿಸಿ ಸಂದೇಶ ಭಾಷಣವನ್ನು ಮಾಡಿದರು. ಇದೇ ವೇಳೆ ಸ್ಥಳೀಯ ನಾಯಕರು, ಕಾರ್ಯಕರ್ತರು ಹಾಜರಿದ್ದರು.