ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಇಂದು ಮಂಗಳೂರು ನಗರದ ಪುರಭವನದಲ್ಲಿ ನಡೆಯಿತು. ಎಡಿಸಿ
ರಾಜು ಕೆ, ಅಧ್ಯಕ್ಷತೆ ವಹಿಸಿದ್ದರು. ಮತಪತ್ರವು ಬುಲೆಟ್ ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವ ಮೂಲಕ ಹಕ್ಕನ್ನು ಚಲಾಯಿಸ ಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ
ಬಸವರಾಜ್ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಅಪರ ಪೋಲೀಸ್ ಅಧೀಕ್ಷಕ ಅನಿಲ ಭೂಮ ರೆಡ್ಡಿ
ಮಾತನಾಡಿ ಅತ್ಯಂತ ಕ್ಲಿಷ್ಟಕರ ಪ್ರದೇಶಗಳಲ್ಲಿಯೂ ಸಹ ಅಧಿಕಾರಿಗಳು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮಾಡುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಇತರರಿಗೂ ಮತದಾನದ ಅರಿವನ್ನು ಮೂಡಿಸಬೇಕೆಂದು ತಿಳಿಸಿದರು. ದ.ಕ ಡಿಡಿಪಿಯು ರಾಜೇಶ್ವರಿ,ಶಶಿಧರ್, ಡಿಡಿಪಿಐ,ತಹಶೀಲ್ದಾರ್ ರಮೇಶ್ ಬಾಬು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 18 ವರ್ಷ ಪೂರೈಸಿದ ವಿಧ್ಯಾರ್ಥಿಗಳಿಗೆ ಮತದಾರ ಕಾರ್ಡ್ ಗಳನ್ನು ವಿತರಿಸಲಾಯಿತು. ಚುನಾವಣಾ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಬಿ.ಎಲ್ ಓ ಗಳನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವರದಿ: ಶಂಶೀರ್ ಬುಡೋಳಿ



