Friday, April 11, 2025
Google search engine

Homeಅಪರಾಧ1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಶಿಕ್ಷೆ ಪ್ರಕಟ

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಶಿಕ್ಷೆ ಪ್ರಕಟ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ಫೆಬ್ರವರಿ 12ರಂದು ರೌಸ್ ಅವೆನ್ಯೂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಇದೀಗ ಫೆಬ್ರವರಿ 21ರಂದು ಶಿಕ್ಷೆ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ.

ಸಜ್ಜನ್ ಕುಮಾರ್ ಅವರ ಮೇಲೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಮುನ್ನಡೆಸಿದ್ದಾರೆ ಎಂದು ಆರೋಪವಿದೆ. ದೂರಿನ ಅನುಸಾರ, ಕೋಪಗೊಂಡ ಗುಂಪೊಂದು ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿ, ಅವರ ಪತಿ ಮತ್ತು ಮಗನನ್ನು ಹತ್ಯೆ ಮಾಡಿತ್ತು. ನವೆಂಬರ್ 1, 1984ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜ್ಜನ್ ಅವರಿಗೆ ಶಿಕ್ಷೆ ನೀಡಲಾಯಿತು. ನಿರ್ಭಯಾ ಮತ್ತು ಇತರ ಪ್ರಕರಣಗಳಲ್ಲಿ ಮಾರ್ಗಸೂಚಿಗಳ ಆಧಾರದ ಮೇಲೆ ಸಜ್ಜನ್ ಕುಮಾರ್ ಅವರಿಗೆ ಮರಣದಂಡನೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಮಾಡಿಕೊಂಡಿದ್ದಾರೆ. ಫೆಬ್ರವರಿ 21 ರಂದು ಶಿಕ್ಷೆಯ ಕುರಿತಾದ ವಾದಗಳನ್ನು ಆಲಿಸಲು ನ್ಯಾಯಾಲಯವು ಪ್ರಕರಣವನ್ನು ಪಟ್ಟಿ ಮಾಡಿದೆ.

RELATED ARTICLES
- Advertisment -
Google search engine

Most Popular