ಬೆಂಗಳೂರು: ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಗೋಡಿ ಬಳಿಯ ಸಿಟಿ ಲೇಔಟ್‌ನಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮೃತ ಮಗುವನ್ನು ಥವನ್ ರೆಡ್ಡಿ ಎಂದು ಗುರುತಿಸಲಾಗಿದ್ದು, ಜೆಸಿಬಿ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ನಿನ್ನೆ ಸಂಜೆ ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ಮೇಲೆ ಜೆಸಿಬಿ ಹರಿದಿದೆ. ತಕ್ಷಣ ಮಗುವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.