Thursday, April 3, 2025
Google search engine

Homeರಾಜ್ಯ೨೦೧೯ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಸುದೀಪ್

೨೦೧೯ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಸುದೀಪ್

ಬೆಂಗಳೂರು: ನಟ ಸುದೀಪ್ ರಾಜ್ಯ ಸರ್ಕಾರ ಪ್ರಕಟಿಸಿದ್ದ ೨೦೧೯ನೇ ಸಾಲಿನ ಶ್ರೇಷ್ಠ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

ಬುಧವಾರ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪ್ರಕಟಿಸಿತ್ತು.

ಚಲನಚಿತ್ರ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಗುರುವಾರ ಟ್ವೀಟ್ ಮಾಡಿರುವ ಸುದೀಪ್, ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಆದರೆ ನನಗಿಂತ ಉತ್ತಮ ಅಭಿನಯ ನೀಡಿದ ಸಾಕಷ್ಟು ಕಲಾವಿದರು ಇದ್ದಾರೆ. ಹಾಗಾಗಿ ಪ್ರಶಸ್ತಿಯನ್ನು ಸ್ವೀಕರಿಸಲು ಸಿದ್ಧನಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಪ್ರಶಸ್ತಿಗಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಕಲೆಯನ್ನು ನೀವು ಗುರುತಿಸಿರೋದು ನನ್ನ ಕೆಲಸಕ್ಕೆ ಸಿಕ್ಕಿರುವ ತಕ್ಕ ಪ್ರತಿಫಲ. ನನ್ನ ನಿರ್ಧಾರವು ಬೇಸರವುಂಟು ಮಾಡಬಹುದು. ತೀರ್ಪುಗಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಹಾಗೂ ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ನಟ ಟ್ವೀಟ್ ನಲ್ಲಿ ವಿವರಿಸಿದ್ದಾರೆ.

RELATED ARTICLES
- Advertisment -
Google search engine

Most Popular