Tuesday, April 8, 2025
Google search engine

HomeUncategorizedರಾಷ್ಟ್ರೀಯ26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ.

ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್ನಿಂದ ಈ ತೀರ್ಪು ಹೊರಬಿದ್ದಿದೆ.

2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾ ಸಲ್ಲಿಸಿದ್ದ ಅರ್ಜಿಯನ್ನು ತರಿಸ್ಕರಿಸಲಾಯಿತು. ಅಲ್ಲದೇ ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹವ್ವೂರ್ ರಾಣಾಗೆ ಸೋಲು ಉಂಟಾಗಿತ್ತು.

ಕಳೆದ ವರ್ಷ ನವೆಂಬರ್ 13 ರಂದು, ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ಸರ್ಟಿಯೊರಾರಿ ರಿಟ್ ಅರ್ಜಿ ಸಲ್ಲಿಸಿದ್ದನು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಜನವರಿ 21 ರಂದು ಸುಪ್ರೀಂ ಕೋರ್ಟ್ ನಿರಾಕರಿಸಿತು.

ರಾಣಾ, ಪ್ರಸ್ತುತ ಲಾಸ್ ಏಂಜಲೀಸ್ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿ ಬಂಧಿತನಾಗಿದ್ದು, ಕಳೆದ ತಿಂಗಳು ಕ್ಯಾಲಿಫೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್ 26/11 ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು.

RELATED ARTICLES
- Advertisment -
Google search engine

Most Popular