Sunday, April 20, 2025
Google search engine

Homeಆರೋಗ್ಯದೇಶದಲ್ಲಿ 272 ಹೊಸ ಕೋವಿಡ್‌ ಪ್ರಕರಣ ದಾಖಲು

ದೇಶದಲ್ಲಿ 272 ಹೊಸ ಕೋವಿಡ್‌ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 272 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ದೇಶದ ಒಟ್ಟಾರೆ ಪ್ರಕರಣಗಳು 2,990ಕ್ಕೆ ಇಳಿಕೆಯಾಗಿವೆ ಎಂದು ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಈ ಅವಧಿಯಲ್ಲಿ ಯಾವುದೇ ಸಾವು ದಾಖಲಾಗಿಲ್ಲ.  2023ರ ಡಿಸೆಂಬರ್‌ 5ರ ಹೊತ್ತಿಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿತ್ತು. ಆದರೆ ಶೀತ ಹವಾಗುಣದಿಂದಾಗಿ ಹೊಸ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿತ್ತು. ಡಿಸೆಂಬರ್ 31ರಂದು 841 ಪ್ರಕರಣಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಸದ್ಯ ಇರುವ ಸಕ್ರಿಯ ಪ್ರಕರಣಗಳ ಪೈಕಿ ಶೇ 92ರಷ್ಟು ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

2020ರ ಆದಿಯಲ್ಲಿ ಕೋವಿಡ್‌ ಸಾಂಕ್ರಮಿಕ ಶುರುವಾದ ಬಳಿಕ ದೇಶದಲ್ಲಿ ಈವರೆಗೆ 4.5 ಕೋಟಿ ಮಂದಿಗೆ ಸೋಂಕು ತಗುಲಿದ್ದು, 5.3 ಲಕ್ಷ ಜನರು ಸಾವಿಗೀಡಾಗಿದ್ದಾರೆ. 4.4 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 220.67 ಕೋಟಿ ಡೋಸ್‌ ಲಸಿಕೆಗಳನ್ನು ವಿತರಿಸಲಾಗಿದೆ.

RELATED ARTICLES
- Advertisment -
Google search engine

Most Popular