ರಾಮನಗರ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆಸ್ತಿಯನ್ನು ತೆಗೆದರೆ ರಾಜ್ಯಕ್ಕೆ ೩ ಬಜೆಟ್ ಮಂಡಿಸಬಹುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಮಾಡ್ತಾರೆ. ಕೇವಲ ೩೭ ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರನ್ನ ನಂಬಬೇಡಿ ಅಂತ ಕಾಂಗ್ರೆಸ್ ನವರಿಗೆ ಅವಾಗ್ಲೆ ಹೇಳಿದ್ದೇ. ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರ ೧ ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗೂರ ಹೊಡೆದುಕೊಂಡು ಬರ್ತಾರೆ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿ-ಜೆಡಿಎಸ್ ಪಾದಯಾತ್ರೆಯಿಂದ ಏನೂ ಆಗಲ್ಲ. ನಾವೆಲ್ಲಾ ಇರೋ ವರೆಗೂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನೂ ಮಾಡೋಕಾಗಲ್ಲ ಎಂದು ಗುಡುಗಿದರು.