Monday, April 21, 2025
Google search engine

Homeಅಪರಾಧಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಇಬ್ಬರ ಬಂಧನ

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಇಬ್ಬರ ಬಂಧನ

ಮಂಗಳೂರು: ಅಮೆಜಾನ್ ಕಂಪನಿಗೆ ಬರೊಬ್ಬರಿ ೩೦ ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (೨೩), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (೨೭) ಬಂಧಿತರು.

ಆರೋಪಿಗಳು ಅಮೆಜಾನ್‌ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.

ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್‌ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್‌ಗೆ ಮಾರಾಟ ಮಾಡುತ್ತಿದ್ದರು. ಐಟಂ ರಿಟರ್ನ್ ಆದ ಬಳಿಕ ಆರ್ಡರ್?ಗೆ ಬಳಸಿದ ಸಿಮ್ ಕಿತ್ತೆಸೆಯುತ್ತಿದ್ದರು. ವಸ್ತು ಅಮೇಜಾನ್ ಗೋಡಾನ್ ತಲುಪಿದ ಬಳಿಕ ವಂಚನೆ ಬೆಳಕಿಗೆ ಬರುತ್ತಿತ್ತು.

ಆರೋಪಿಗಳು ಕಳೆದ ಐದು ವರ್ಷಗಳಿಂದಲೂ ಈ ರೀತಿ ವಂಚನೆ ಮಾಡುತ್ತಿದ್ದಾರೆ. ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ೧೦ಕ್ಕೂ ಹೆಚ್ಚು ರಾಜ್ಯಗಳಲ್ಲಿ ನೆಲೆಸಿ ವಂಚನೆ ಮಾಡಿದ್ದಾರೆ. ಆರೋಪಿಗಳು ಈವರೆಗೂ ಲಾಕ್ ಆಗಿರಲಿಲ್ಲ. ಆದರೆ, ಇದೀಗ ಮಂಗಳೂರಿನ ಉರ್ವಾ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular