ಮಧ್ಯಪ್ರದೇಶ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್‍ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ಜನತೆಗೆ 300 ಯುನಿಟ್‍ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಇದಲ್ಲದೆ ಮಧ್ಯಪ್ರದೇಶದ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ.ಗಳ ಜೊತೆಗೆ ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ನೀಡಿದ್ದಾರೆ. ಸತ್ನಾದಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪರೋಕ್ಷವಾಗಿ ಗೇಲಿ ಮಾಡಿ . ನೀವು ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಸಾಕಷ್ಟು ಅವಕಾಶ ನೀಡಿದ್ದೀರಿ. ದೆಹಲಿ ಮತ್ತು ಪಂಜಾಬ್‍ನಲ್ಲಿರುವ ನಮ್ಮ ಸರ್ಕಾರವನ್ನು ನೋಡಿ, ನಾವು ಎಲ್ಲಾ ಭರವಸೆಗಳನ್ನು ಪೂರೈಸುತ್ತೇವೆ. ಇದು ಕೇಜ್ರಿವಾಲ್ ಗ್ಯಾರಂಟಿ ಎಂದರು.